ADVERTISEMENT

ನಾಡಿನ ಇತಿಹಾಸಕಾರ ಪ್ರೊ.ಷೇಕ್ ಆಲಿ ನಿಧನ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 9:20 IST
Last Updated 1 ಸೆಪ್ಟೆಂಬರ್ 2022, 9:20 IST
ಪ್ರೊ.ಬಿ.ಷೇಕ್ ಆಲಿ
ಪ್ರೊ.ಬಿ.ಷೇಕ್ ಆಲಿ   

ಮೈಸೂರು: ಇತಿಹಾಸಕಾರ ಪ್ರೊ.ಬಿ.ಷೇಕ್ ಆಲಿ (98) ಗುರುವಾರ ಮಧ್ಯಾಹ್ನ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ‌.

ಹಾಸನದ ಸಕಲೇಶಪುರ ತಾಲ್ಲೂಕಿನ ಬೆಳ್ಗೋಡಿನಲ್ಲಿ ನ.10, 1925ರಲ್ಲಿ ಜನಿಸಿದ ಷೇಕ್ ಆಲಿ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದು, ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದರು.

ADVERTISEMENT

ಲಂಡನ್ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದರು. ನಂತರ ಮೈಸೂರು ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.

ಮಂಗಳೂರು ಹಾಗೂ ಗೋವಾ ವಿಶ್ವವಿದ್ಯಾಲಯಗಳ ಮೊದಲ ಕುಲಪತಿಗಳಾಗಿ ಸೇವೆ ಸಲ್ಲಿಸಿದರು.

ಕರ್ನಾಟಕ ಇತಿಹಾಸದ ಕುರಿತು 50ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ನೂರಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ.

ಟಿಪ್ಪು ಸುಲ್ತಾನ್, ಹೈದರ್ ಆಲಿ ಕುರಿತು ಹಲವು ಪುಸ್ತಕಗಳನ್ನು ಬರೆದಿದ್ದು, 'ಟಿಪ್ಪು ಸುಲ್ತಾನ್, ಎ ಗ್ರೇಟ್ ಮಾರ್ಟಿಯರ್‌' ಪ್ರಸಿದ್ಧವಾಗಿದೆ.

ಹಿಸ್ಟರಿ: ಇಟ್ಸ್ ಥಿಯರಿ ಅಂಡ್ ಮೆಥೆಡ್, ಹಿಸ್ಟರಿ ಆಫ್ ದ ವೆಸ್ಟ್ರನ್ ಗಂಗಾಸ್‌, ಗೋವಾ ವಿನ್ಸ್ ಫ್ರೀಡಂ- ಇತರ ಪ್ರಮುಖ ಕೃತಿಗಳು.

'ಸಲಾರ್' ಉರ್ದು ದಿನಪತ್ರಿಕೆಯ ಮುಖ್ಯ ಸಂಪಾದಕರಾಗಿದ್ದ ಅವರು, ಮುಸ್ಲಿಂ ಎಜುಕೇಶನ್ ಸೊಸೈಟಿ ಹಾಗೂ ನ್ಯೂ ಮುಸ್ಲಿಂ ಹಾಸ್ಟೆಲ್ ನ ಸಂಸ್ಥಾಪಕ ಅಧ್ಯಕ್ಷರಾಗಿ ಸಮುದಾಯದ ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸಿದ್ದರು.

ಸರಸ್ವತಿಪುರಂನ ನ್ಯೂ ಮುಸ್ಲಿಂ ಹಾಸ್ಟೆಲ್ ನಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕೇಂದ್ರ ಕಾರಾಗೃಹದ ಬಳಿಯಿರುವ ಖಬರ್ ಸ್ತಾನದಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.