ADVERTISEMENT

ಮೈಸೂರು–ಕೊಡಗು ಕ್ಷೇತ್ರ: ಪ್ರಚಾರದ ಭರಾಟೆ ಹೆಚ್ಚಿಸಿದ್ದ ಮೋದಿ

ಬಹಿರಂಗ ಪ್ರಚಾರಕ್ಕೆ ತೆರೆ

​ಪ್ರಜಾವಾಣಿ ವಾರ್ತೆ
Published 3 ಮೇ 2019, 17:45 IST
Last Updated 3 ಮೇ 2019, 17:45 IST
   

ಮೈಸೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರಕ್ಕೆ ಮಂಗಳವಾರ ತೆರೆಬಿತ್ತು.

ನೆರೆಯ ಜಿಲ್ಲೆಗಳಾದ ಮಂಡ್ಯ, ಹಾಸನಕ್ಕೆ ಹೋಲಿಸಿದರೆ ಮೈಸೂರಿನಲ್ಲಿ ಪ್ರಚಾರ ತಡವಾಗಿ ಕಾವು ಪಡೆದುಕೊಂಡಿತ್ತು. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು ಪ್ರಚಾರದ ಭರಾಟೆ ಹೆಚ್ಚಿಸಿದ್ದರು. ಬಿಎಸ್‌ಪಿ ನಾಯಕಿ ಮಾಯಾವತಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್‌–ಕಾಂಗ್ರೆಸ್‌ ಜಂಟಿ ಸಮಾವೇಶ ಆಯೋಜಿಸಲಾಗಿತ್ತು. ಉಭಯ ಪಕ್ಷಗಳ ಮುಖಂಡರು ಒಗ್ಗಟ್ಟು ಪ್ರದರ್ಶಿಸಿದ್ದರು.

ಜೆಡಿಎಸ್‌ ಕಾರ್ಯಕರ್ತರ ಮನವೊಲಿಸುವ ಉದ್ದೇಶದಿಂದ ಜಿ.ಟಿ.ದೇವೇಗೌಡ ಜತೆಗಿನ 13 ವರ್ಷಗಳ ವೈರತ್ವಕ್ಕೆ ಸಿದ್ದರಾಮಯ್ಯ ತೆರೆ ಎಳೆದಿದ್ದರು. ಮೈತ್ರಿ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌– ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ನಡುವೆ ನೇರ ಹಣಾಹಣಿ ನಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.