ADVERTISEMENT

ಅಧಿಕಾರಿಗಳ ಕಿತ್ತಾಟ: ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್‌ ಎತ್ತಂಗಡಿ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 0:52 IST
Last Updated 6 ಜೂನ್ 2021, 0:52 IST
ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್‌
ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್‌    

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್‌ ಅವರನ್ನು ಶನಿವಾರ ರಾತ್ರಿ ಎತ್ತಂಗಡಿ ಮಾಡಲಾಗಿದೆ.

ರೋಹಿಣಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಅವರು ಇದೇ ಹುದ್ದೆಯಲ್ಲಿದ್ದರು. ಶಿಲ್ಪಾ ನಾಗ್ ಅವರನ್ನು ಆವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ನಿರ್ದೇಶಕರಾಗಿ (ಇ– ಆಡಳಿತ) ವರ್ಗಾವಣೆ ಮಾಡಲಾಗಿದೆ.

ವಾಣಿಜ್ಯತೆರಿಗೆ ಇಲಾಖೆಯ (ಜಾರಿ) ಹೆಚ್ಚುವರಿ ಆಯುಕ್ತರಾಗಿದ್ದ ಡಾ. ಬಗಾದಿ ಗೌತಮ್‌ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಆಡಳಿತ ವ್ಯವಸ್ಥಾಪಕ ಲಕ್ಷ್ಮೀಕಾಂತ ರೆಡ್ಡಿ ಅವರನ್ನು ಮೈಸೂರು ಪಾಲಿಕೆ ಆಯುಕ್ತರಾಗಿ ನೇಮಿಸಲಾಗಿದೆ.

ADVERTISEMENT

ವರ್ಗಾವಣೆಯಾದ ಇತರರು: ಪಿ. ರಾಜೇಂದ್ರ ಚೋಳನ್‌– ಆಡಳಿತ ನಿರ್ದೇಶಕ, ಬೆಸ್ಕಾಂ ಹೆಚ್ಚುವರಿಯಾಗಿ ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ ಮತ್ತು ಐಟಿ) ಹುದ್ದೆ ಮತ್ತು ದಯಾನಂದ ಕೆ.ಎ– ಬಿಬಿಎಂಪಿ ವಿಶೇಷ ಆಯುಕ್ತ ( ಆಡಳಿತ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.