ADVERTISEMENT

₹4,500ಕ್ಕೆ ಮೈಸೂರು ಸಿಲ್ಕ್ ಸೀರೆ: ಸಾ.ರಾ.ಮಹೇಶ್ ಭರವಸೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2018, 7:31 IST
Last Updated 29 ಜೂನ್ 2018, 7:31 IST
ಸಾ.ರಾ.ಮಹೇಶ್
ಸಾ.ರಾ.ಮಹೇಶ್   

ಮೈಸೂರು: ವರಮಹಾಲಕ್ಷ್ಮಿ ಹಬ್ಬಕ್ಕೆ ಮಧ್ಯಮ ವರ್ಗದವರಿಗಾಗಿ ₹4,500 ಕ್ಕೆ ಮೈಸೂರು ಸಿಲ್ಕ್ ಸೀರೆಯನ್ನು ಮಾರಾಟ ಮಾಡುವ ಪ್ರಸ್ತಾವ ಇದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು.

ಶುಕ್ರವಾರಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಮಳಿಗೆಗಳಲ್ಲಿ ಮಾತ್ರ ಮೈಸೂರು ಸಿಲ್ಕ್ ಸೀರೆಗಳು ದೊರೆಯುತ್ತವೆ. ಆದರೆ ಈಗ ಖಾಸಗಿ ಮಳಿಗೆಗಳಲ್ಲೂ ನಕಲಿ ಮೈಸೂರು ಸಿಲ್ಕ್ ಸೀರೆಗಳು ಸಿಗುತ್ತಿವೆ. ಇದಕ್ಕೆ ಕಡಿವಾಣ ಹಾಕಲು ತನಿಖಾ ದಳ ರಚನೆ ಮಾಡುವುದಾಗಿ ತಿಳಿಸಿದರು.

ADVERTISEMENT

ಕೊಡಗು ಜಿಲ್ಲೆಯಲ್ಲಿ ಇರುವ ಅನಧಿಕೃತ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.