ADVERTISEMENT

ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ: ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 10:46 IST
Last Updated 8 ನವೆಂಬರ್ 2019, 10:46 IST
ಬಸ್ಸು ಮತ್ತು ಕಾರಿನ ನಡುವೆ ಅಪಘಾತ
ಬಸ್ಸು ಮತ್ತು ಕಾರಿನ ನಡುವೆ ಅಪಘಾತ   

ಮೈಸೂರು: ಮೈಸೂರು - ತಿ.ನರಸೀಪುರ ರಸ್ತೆಯ ದುದ್ದಗೆರೆ ಗ್ರಾಮದ ಬಳಿ ಶುಕ್ರವಾರ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.

ತಿ.ನರಸೀಪುರದಿಂದ ಮೈಸೂರು ಕಡೆಗೆ ಬರುತ್ತಿದ್ದ ಕಾರು ಬಸ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಮೋಹನ, ಉಮಾ ಸೇರಿ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬರ ಹೆಸರು ತಿಳಿದುಬಂದಿಲ್ಲ.

ತಿರುವಿನಲ್ಲಿ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಕಾರು ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.