ADVERTISEMENT

ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿ ಅಲ್ಲ, ಸಾವಿನ ರಹದಾರಿ– ಎಚ್‌ಡಿಕೆ ಆರೋಪ

ಈ ಹೆದ್ದಾರಿಯನ್ನು ಅತ್ಯಂತ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2023, 14:33 IST
Last Updated 21 ಜೂನ್ 2023, 14:33 IST
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ   

ಮೈಸೂರು: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರು, ಇದು ಎಕ್ಸ್ ಪ್ರೆಸ್ ಹೆದ್ದಾರಿಯೋ ಅಥವಾ ಸಾವಿನ ರಹದಾರಿಯೋ? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಬುಧವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹೆದ್ದಾರಿಯನ್ನು ಅತ್ಯಂತ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಅದನ್ನು ಸರಿಪಡಿಸುವ ಬಗ್ಗೆ ಕೇಂದ್ರ ಸರ್ಕಾರವಾಗಲಿ, ಹೆದ್ದಾರಿ ಪ್ರಾಧಿಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಗಮನ ಕೊಡುತ್ತಿಲ್ಲ. ಯಾರೋ ಬಂದರು, ದುಡ್ಡು ಮಾಡಿಕೊಂಡು ಹೋದರು. ಜನ ಮಾತ್ರ ದಿನನಿತ್ಯವೂ ಸಾಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದರು.

ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು ಕಡಿತಕ್ಕೆ ಕುಮಾರಸ್ವಾಮಿ ಕಿಡಿ

ADVERTISEMENT

ಶಾಲಾ ಮಕ್ಕಳಿಗೆ ವಿತರಣೆ ಮಾಡಲಾಗುವ ಮೊಟ್ಟೆ, ಬಾಳೆ ಹಣ್ಣು ಕಡಿತ ಮಾಡಿರುವ ಬಗ್ಗೆಯೂ ಕುಮಾರಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಮುಂದೆ ಒಂದು ಮೊಟ್ಟೆ, ಒಂದು ಬಾಳೆಹಣ್ಣು ಅದು ಕೂಡ ಇರಲ್ವೇನೊ? ಇವರಿಗೆ ಮಕ್ಕಳ ಆಹಾರದಲ್ಲಿ ಹಣದ ಹಪಾಹಪಿ ಶುರುವಾಗಿದೆ ಎಂದು ಅವರು ಕಟುವಾಗಿ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.