ಬಾನು ಮುಷ್ತಾಕ್
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಅಹ್ವಾನ ನೀಡಿರುವುದನ್ನು ಪ್ರಶ್ನಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ಅರ್ಜಿದಾರ ಗಿರೀಶ್ ಕುಮಾರ್ ಪರ ವಕೀಲರು ಗುರುವಾರ ಬೆಳಿಗ್ಗೆ ನ್ಯಾಯಾಲಯದ ದಿನದ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ವಿಭು ಖಬ್ರು ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮೆಮೋ ಸಲ್ಲಿಸಿದರು ಮತ್ತು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.
ಇದನ್ನು ನಿರಾಕರಿಸಿದ ನ್ಯಾಯಪೀಠ ‘ಅರ್ಜಿಗಳ ಸಾಮಾನ್ಯ ಸರದಿಯಂತೆ ನಾಲ್ಕು ದಿನಗಳಲ್ಲಿ ವಿಚಾರಣೆಗೆ ನಿಗದಿಯಾಗಲಿದೆ’ ಎಂದು ತಿಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.