ADVERTISEMENT

ದಸರಾ ಉದ್ಘಾಟನೆ | ಬಾನು ಮುಷ್ತಾಕ್‌ಗೆ ಜಿಲ್ಲಾಡಳಿತದಿಂದ ಆಹ್ವಾನ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 10:56 IST
Last Updated 22 ಆಗಸ್ಟ್ 2025, 10:56 IST
<div class="paragraphs"><p>ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ

   

ಬೆಂಗಳೂರು: ಈ ಬಾರಿಯ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಅವರನ್ನು ಜಿಲ್ಲಾಡಳಿತದ ವತಿಯಿಂದ ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ಬಾನು ಮುಷ್ತಾಕ್ ಅವರ ಕೃತಿ 'ಎದೆಯ ಹಣತೆ'ಗೆ ಬುಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್, ಪ್ರಗತಿಪರ ಚಿಂತಕರೂ ಆಗಿದ್ದಾರೆ ಎಂದರು. ಈ ಬಾರಿ ಶಾಸ್ತ್ರದ ಪ್ರಕಾರ ಹನ್ನೊಂದು ದಿನ ದಸರಾ ನಡೆಯಲಿದೆ. ಅಕ್ಟೋಬರ್ 2 ರಂದು ವಿಜಯದಶಮಿ ಎಂದರು.

ರಕ್ಷಣಾ ಸಚಿವರಿಗೆ ಪತ್ರ
ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ದಸರಾ ವೀಕ್ಷಣಗೆ ಆಗಮಿಸಬೇಕೆಂದು ಪತ್ರ ಬರೆದಿದ್ದೇನೆ ಎಂದರು.

ಆ. 29 ರಂದು ಪಾದಯಾತ್ರೆಯಲ್ಲಿ ಭಾಗಿ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಬಿಹಾರದಲ್ಲಿ ಮತಗಳ್ಳತನ ನಡೆದಿರುವುದನ್ನು ವಿರೋಧಿಸಿ 16 ದಿನಗಳ ಪಾದಯಾತ್ರೆಯನ್ನು ಕೈಗೊಂಡಿದ್ದು, ಈ ತಿಂಗಳ 29ರಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದರು.

ಲೋಕಸಭೆಯಲ್ಲಿ ಮಂಡಿಸಲಾಗಿರುವ 30 ದಿನಗಳ ಕಾಲ ಜೈಲು ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ ಮುಖ್ಯಮಂತ್ರಿಗಳನ್ನು ವಜಾ ಮಾಡುವ ಮಸೂದೆ ಬಗ್ಗೆ ಮಾತನಾಡಿ, ಮಸೂದೆಯನ್ನು ಸದನ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.