ADVERTISEMENT

ದಸರಾ ಕುಸ್ತಿ: ಜೋಡಿ ಕಟ್ಟುವ ಕಾರ್ಯ ಆರಂಭ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2022, 7:41 IST
Last Updated 18 ಸೆಪ್ಟೆಂಬರ್ 2022, 7:41 IST
ಮೈಸೂರಿನ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿಯ ಜೋಡಿ ಕಟ್ಟುವ ಕಾರ್ಯಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೈಲ್ವಾನರ ಬೆನ್ನು ತಟ್ಟುವ ಮೂಲಕ ಚಾಲನೆ ನೀಡಿದರು. ಆರ್.ಚೇತನ್, ಪ್ರತಾಪಸಿಂಹ, ಜಿ.ಟಿ.ದೇವೇಗೌಡ, ಶ್ರೀನಿವಾಸ ಗೌಡ, ಶಿವಕುಮಾರ್ ಇದ್ದರು

ಮೈಸೂರು: ದಸರಾ ಕುಸ್ತಿ ಪಂದ್ಯಾವಳಿ ಸೆ.26ರಿಂದ ಅ.2ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಭಾನುವಾರ ಕುಸ್ತಿಪಟುಗಳ ಜೋಡಿ ಕಟ್ಟುವ ಕಾರ್ಯ ನಡೆಯಿತು.

ಕಾಳಿಂಗರಾವ್ ಭವನದಲ್ಲಿ ಕುಸ್ತಿಪಟುಗಳಿಗೆ ಬೆನ್ನುತಟ್ಟುವ ಮೂಲಕ ಜೋಡಿ ಕಟ್ಟುವ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.‌

ನಗರವೂ ಸೇರಿದಂತೆ ನಾಡಿನ ವಿವಿಧ ಗರಡಿ ಮನೆಗಳಿಂದ 200ಕ್ಕೂ ಹೆಚ್ಚು ಪೈಲ್ವಾನರು ಪಂದ್ಯಾವಳಿಯಲ್ಲಿ ಭಾಗವಹಿಸಲು ಆಗಮಿಸಿದ್ದು, ಅರ್ಜಿ ಹಾಗೂ ಪೂರಕ ದಾಖಲೆಗಳನ್ನು ನೀಡಿದರು.

ADVERTISEMENT

ನಂತರ ಚಿಣ್ಣರು, ಪೈಲ್ವಾನರು ಗದೆ ತಿರುಗಿಸುವ, ಕಲ್ಲು ಗುಂಡು ಎತ್ತುವ, ದಂಡ ಹೊಡೆಯುವ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಭಾಗಿಯಾದರು. ಪುರುಷರು ಹಾಗೂ ಮಹಿಳೆಯರಿಗೆ ಸ್ಪರ್ಧೆಗಳು ನಡೆದವು.

ಕಾರ್ಯಕ್ರಮದಲ್ಲಿ ಗಣ್ಯರಿಗೆ ಪೇಟ ತೊಡಿಸಲಾಯಿತು‌.

ಸಂಸದ ಪ್ರತಾಪಸಿಂಹ, ಮೇಯರ್ ಶಿವಕುಮಾರ್, ಶಾಸಕ ಜಿ.ಟಿ.ದೇವೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಎಎಸ್ಪಿ ಬಿ.ಎನ್.ನಂದಿನಿ ಇದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.