ಬೆಂಗಳೂರು: "ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ‘ಬಿ’ ಅಂತಿಮ ವರದಿ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಅರ್ಜಿಗಳ ಆಧಾರದಡಿ ಲೋಕಾಯುಕ್ತ ಮುಂದುವರಿದ ತನಿಖೆ ನಡೆಸಬೇಕು" ಎಂದು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
"ಬಿ" ಅಂತಿಮ ವರದಿ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಇ.ಡಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ" ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಮಂಗಳವಾರ ಪ್ರಕಟಿಸಿದರು.
ತನಿಖೆ ಮುಂದುವರಿಸಲು ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಪೋಲಿಸರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.