ADVERTISEMENT

ಮೈಸೂರು ಅತ್ಯಾಚಾರ ಪ್ರಕರಣ: ಪೊಲೀಸರಿಗೆ ₹1 ಲಕ್ಷ ಬಹುಮಾನ ಘೋಷಿಸಿದ ನಟ ಜಗ್ಗೇಶ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಆಗಸ್ಟ್ 2021, 12:29 IST
Last Updated 28 ಆಗಸ್ಟ್ 2021, 12:29 IST
ಜಗ್ಗೇಶ್
ಜಗ್ಗೇಶ್   

ಮೈಸೂರು: ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಭೇದಿಸಿರುವ ಪೊಲೀಸರಿಗೆ ನಟ ಜಗ್ಗೇಶ್‌ ₹1 ಲಕ್ಷ ಬಹುಮಾನ ಘೋಷಿಸಿದ್ದಾರೆ.

ಈ ಕುರಿತು ಶನಿವಾರ ಸಂಜೆ ಟ್ವೀಟ್‌ ಮಾಡಿರುವ ಅವರು, 'ಕಾಲೇಜು ವಿಧ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಕಾಮಪಿಪಾಸುಗಳನ್ನು ಬಂಧಿಸಿದ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ಅಭಿನಂದನೆಗಳು' ಎಂದು ತಿಳಿಸಿದ್ದಾರೆ.

'ನಮ್ಮ ರಾಜ್ಯದ ಪೊಲೀಸರ ಬಗ್ಗೆ ನನಗೆ ಹೆಮ್ಮೆ ಇದೆ. ನನ್ನ ಕಡೆಯಿಂದ ಪ್ರಕರಣ ಭೇದಿಸಿರುವ ನಲ್ಮೆಯ ಪೊಲೀಸರಿಗೆ ₹1 ಲಕ್ಷ ಬಹುಮಾನ ನೀಡಲಿದ್ದೇನೆ. ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ. ರಾಷ್ಟ್ರಕ್ಕೆ ಮಾದರಿ ನಮ್ಮ ಪೊಲೀಸ್‌' ಎಂದು ನವರಸ ನಾಯಕ ಜಗ್ಗೇಶ್‌ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಶನಿವಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.