ಮಧುಸೂದನ್ ಕೆ.ಎಸ್.
ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯ ನೀಡುವ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಮೈಸೂರಿನ ಹಿನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ವಿಜ್ಞಾನ ಶಿಕ್ಷಕ ಮಧುಸೂದನ್ ಕೆ.ಎಸ್. ಆಯ್ಕೆಯಾಗಿದ್ದಾರೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಸೆಪ್ಟೆಂಬರ್ ಐದರಂದು ನಡೆಯುವ ಸಮಾರಂಭದಲ್ಲಿ ವಿವಿಧ ರಾಜ್ಯಗಳ 45 ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 50 ಸಾವಿರ ನಗದು ಹಾಗೂ ಬೆಳ್ಳಿಯ ಪದಕವನ್ನು ಒಳಗೊಂಡಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.