ADVERTISEMENT

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ನವೆಂಬರ್ 2025, 6:58 IST
Last Updated 1 ನವೆಂಬರ್ 2025, 6:58 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು(ಚಿತ್ರ ನಗರಿ) ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಮಾನವೀಯ ಮೌಲ್ಯಗಳನ್ನು ಬೆಸೆಯುವ ಕನ್ನಡ ಸಿನಿಮಾಗಳು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂಬುದು ನಮ್ಮ ಆಶಯ' ಎಂದು ಬರೆದುಕೊಂಡಿದ್ದಾರೆ.

ADVERTISEMENT

ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಕಡ್ಡಾಯ

ರಾಜ್ಯದಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ - ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ - ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂಬ ಆದೇಶ ಹೊರಡಿಸಿದ್ದೇವೆ. ಬೇರೆ ಭಾಷೆಗಳನ್ನು ಗೌರವಿಸೋಣ. ನೆಲದ ಭಾಷೆ ಕನ್ನಡವನ್ನು ಪ್ರೀತಿಸೋಣ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.