
ಮಲ್ಲಿಕಾರ್ಜುನ ಮುತ್ಯಾ
ಬೆಂಗಳೂರು: ಯಾದಗಿರಿ ಜಿಲ್ಲೆಯ ಮಹಲ್ ರೋಜಾದ ಪೀಠಾಧಿಪತಿ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ವಿಧಾನಪರಿಷತ್ ವಿರೋಧಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ದೂರಿದ್ದಾರೆ.
‘ಮುತ್ಯಾ ಅವರು ಅನೇಕ ಸಾಮಾಜಿಕ ಸೇವೆಗಳನ್ನು ಮಾಡುತ್ತಿದ್ದಾರೆ. ಅವರ ಏಳಿಗೆಯನ್ನು ಸಹಿಸದ ಕೆಲ ಜನರು ಅವರ ತೇಜೋವಧೆ ಮಾಡುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.
‘ಮುತ್ಯಾ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಏಳು ವರ್ಷದ ಬಾಲಕಿ ಜತೆ ಮಮತೆಯಿಂದ ವರ್ತಿಸಿರುವುದನ್ನು ತಪ್ಪಾಗಿ ಬಣ್ಣಿಸಲಾಗಿದೆ. ಕೆಲ ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಮಾಧ್ಯಮಗಳು ಆ ವಿಡಿಯೊವನ್ನು ತಿರುಚಿ ಬೇರೆ ಅರ್ಥ ಕಲ್ಪಿಸಿ ಪ್ರಸಾರ ಮಾಡುತ್ತಿವೆ’ ಎಂದು ಹೇಳಿದ್ದಾರೆ.
ಪೊಲೀಸ್ ಇಲಾಖೆ ಈ ಪ್ರಕರಣದ ನಿಜಸ್ಥಿತಿಯನ್ನು ಸಮಗ್ರವಾಗಿ ತನಿಖೆ ನಡೆಸಿ, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಪ್ರಕರಣವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.