ADVERTISEMENT

ಕಲ್ಯಾಣ ಕರ್ನಾಟಕ ಹಿನ್ನಡೆಗೆ ಖರ್ಗೆ ಕಾರಣ: ರವಿಕುಮಾರ್

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2023, 21:46 IST
Last Updated 10 ಫೆಬ್ರುವರಿ 2023, 21:46 IST
ಎನ್‌.ರವಿಕುಮಾರ್‌
ಎನ್‌.ರವಿಕುಮಾರ್‌   

ಕಲಬುರಗಿ: ‘ಕಲ್ಯಾಣ ಕರ್ನಾಟಕ ಪ್ರದೇಶ ಹಿಂದುಳಿಯಲು ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್‌ ನಾಯಕರೇ ಕಾರಣ. ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಶೂನ್ಯ. ಅಭಿವೃದ್ಧಿಗೆ ಮೀಸಲಾಗಿದ್ದ ಹಣ ದುರ್ಬಳಕೆ ಮಾಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಆರೋಪಿಸಿದರು.

ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದಶಕಗಳ ಕಾಲ ಸಚಿವರಾಗಿದ್ದರೂ ಖರ್ಗೆ ಅವರು ಅಭಿವೃದ್ಧಿಗೆ ಆದ್ಯತೆ ನೀಡಲಿಲ್ಲ. ಬಜೆಟ್‌ನಲ್ಲಿ ಅನುದಾನ ಮೀಸಲು ಇರದಿದ್ದರೂ ಬರುತ್ತಿದ್ದ ಹಣವನ್ನು ಅವರು ಏನು ಮಾಡಿದರು? ಚಿತ್ತಾಪುರ, ಗುರುಮಠಕಲ್ ಕ್ಷೇತ್ರ ಅಭಿವೃದ್ಧಿ ಆಗದಿರುವುದಕ್ಕೆ ಹೊಣೆ ಯಾರು’ ಎಂದು ಪ್ರಶ್ನಿಸಿದರು.

‘ಅಭಿವೃದ್ಧಿ ಕಾರ್ಯಕೈಗೊಳ್ಳದ ಕಾರಣ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದರು. ಲಂಗು ಲಗಾಮಿಲ್ಲದೆ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರನ್ನೂ 25 ಸಾವಿರ ಮತಗಳ ಅಂತರದಿಂದ ಸೋಲಿಸುತ್ತೇವೆ’ ಎಂದರು.

ADVERTISEMENT

‘ಸಿದ್ದರಾಮಯ್ಯ ಕ್ಷೇತ್ರ ಹುಡುಕಲಿ’

ಕಲಬುರಗಿ: ‘ಸಿದ್ದರಾಮಯ್ಯ ಅವರನ್ನು ಕೋಲಾರದಲ್ಲಿ ಸ್ವಪಕ್ಷದವರೇ ಸೋಲಿಸಲಿದ್ದಾರೆ ಎಂದು ಸವದತ್ತಿ ಕ್ಷೇತ್ರಕ್ಕೆ ಹೋಗುತ್ತಾರೆ ಎಂಬ ಸುದ್ದಿಗಳಿವೆ’ ಎಂದು ರವಿಕುಮಾರ್ ಹೇಳಿದರು.

‘ವಿಧಾನಸಭೆಯ ಪ್ರತಿಪಕ್ಷದ ನಾಯರು ಅಧಿವೇಶನದಲ್ಲಿ ಭಾಗವಹಿಸುವುದು ಬಿಟ್ಟು, ಧ್ವನಿಯೇ ಇಲ್ಲದ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.