ಬೆಂಗಳೂರು: ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ಪರಿಶೀಲನಾ ಸಮಿತಿಯ ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯದ ಅಧ್ಯಾಪಕರು ಮತ್ತು ಸಿಬ್ಬಂದಿ ಭಾಗಿಯಾಗಿರುವುದಕ್ಕೆ ಸಾಕ್ಷ್ಯ ನೀಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಗಾಯತ್ರಿ ದೇವರಾಜ, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಐಕ್ಯುಎಸಿ–ನ್ಯಾಕ್ ನಿರ್ದೇಶಕ ಎಂ.ಹನುಮಂತಪ್ಪ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಷಯ ಕುರಿತು ರಾಜ್ಯ ಸರ್ಕಾರಕ್ಕೆ ಸಿಬಿಐ ಅಧಿಕೃತ ಮಾಹಿತಿ ನೀಡಿಲ್ಲ ಎಂದರು.
ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು ಲಕ್ಷ್ಮಯ್ಯ ಎಜುಕೇಷನ್ ಫೌಂಡೇಷನ್ (ಕೆಎಲ್‌ಇಎಫ್) ನ್ಯಾಕ್‌ನಿಂದ ‘ಎ’ ಪ್ಲಸ್ ಗ್ರೇಡ್ ಪಡೆಯಲು ಲಂಚ ನೀಡಿದ ಆರೋಪ ಕೇಳಿಬಂದಿತ್ತು. ಸಿಬಿಐ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ.
ವಿಶ್ವವಿದ್ಯಾಲಯದಲ್ಲಿನ ಮೂಲಸೌಕರ್ಯಗಳು, ಸಂಶೋಧನೆ, ವೈಜ್ಞಾನಿಕ ಉಪಕರಣಗಳು, ಬೋಧನೆ, ಸಂಶೋಧನೆಗಳಿಗೆ ಪೇಟೆಂಟ್ ಬಂದಿರುವುದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳ ಮಂಡನೆ, ಕಲಿಕೆ, ಬೋಧನೆ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ತಂತ್ರಜ್ಞಾನದ ಅಳವಡಿಕೆ ಸೇರಿದಂತೆ ಅಂಶಗಳನ್ನು ಆಧರಿಸಿ ನ್ಯಾಕ್ ಸಮಿತಿಯು ಅಂಕ ಮತ್ತು ಗ್ರೇಡ್‌ಗಳನ್ನು ನೀಡುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.