ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದ ‘ನಾವು ಮನುಜರು’ ಕಾರ್ಯಕ್ರಮವನ್ನು ಎಲ್ಲಾ ಶಾಲಾ-ಕಾಲೇಜುಗಳಲ್ಲೂ ಆರಂಭಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ, ಮೌಲ್ಯಯುತ ಶಿಕ್ಷಣ ಮತ್ತು ಸಹಬಾಳ್ವೆಯನ್ನು ಉತ್ತೇಜಿಸಲು ಸಂಪನ್ಮೂಲ ವ್ಯಕ್ತಿಗಳು, ತಜ್ಞರನ್ನು ಆಹ್ವಾನಿಸಿ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವಾರಕ್ಕೆ ಎರಡು ಗಂಟೆಗಳನ್ನು (ತಲಾ 40 ನಿಮಿಷಗಳ ಮೂರು ಕಾರ್ಯಕ್ರಮ) ಮೀಸಲಿಡಲು ಸೂಚಿಸಲಾಗಿದೆ.
ದೇಶದ ಸಮಾಜ ಸುಧಾರಕರು, ಕ್ರಾಂತಿಗಳ ಮಾಹಿತಿ ಒದಗಿಸುವುದು, ಸಮೀಪದ ಐತಿಹಾಸಿಕ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವುದು, ಸಮಾಜದಲ್ಲಿನ ಅಸಮಾನತೆ ನಿವಾರಣೆ ಕುರಿತು ಚರ್ಚೆಗಳನ್ನು ಆಯೋಜಿಸಲು ತಿಳಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಕಾರ್ಯಕ್ರಮ ಜಾರಿಗೊಳಿಸಲು ಸೂಚಿಸಲಾಗಿದೆ. ಆದರೆ, ಕಾರ್ಯಕ್ರಮ ಅನುಷ್ಠಾನಕ್ಕೆ ಪ್ರತ್ಯೇಕ ಹಣ ಬಿಡುಗಡೆ ಮಾಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.