ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯಪಾಲರ ಆದೇಶದ ಅನುಸಾರ ರಾಜ್ಯ ಸರ್ಕಾರ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಕರ್ನಾಟಕದ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಹುದ್ದೆಗೆ ನೇಮಕ ಮಾಡಿ ಬುಧವಾರ ಆದೇಶಿಸಿದೆ.
ಕಳೆದ ಮೂರು ವರ್ಷಗಳಿಂದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಅಧ್ಯಕ್ಷರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.