ADVERTISEMENT

ಜನಾರ್ದನ ರೆಡ್ಡಿಗೆ ಕುಣಿಕೆ ಬಿಗಿಗೊಳಿಸಲು ಚಂದ್ರಬಾಬು ನಾಯ್ಡು ಒತ್ತಡ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2018, 20:18 IST
Last Updated 8 ನವೆಂಬರ್ 2018, 20:18 IST
   

ಬೆಂಗಳೂರು:₹ 20 ಕೋಟಿ ಡೀಲ್‌ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣವನ್ನು ಬಿಗಿಗೊಳಿಸುವಂತೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಅವರ ಜತೆಗಿನ ಮಾತುಕತೆ ಸಂದರ್ಭದಲ್ಲಿ ನಾಯ್ಡು ಈ ವಿಷಯ ಪ್ರಸ್ತಾಪಿಸಿದರು ಎಂದು ಮೂಲಗಳು ತಿಳಿಸಿವೆ.

‘ಇಲ್ಲಿ ಜನಾರ್ದನ ರೆಡ್ಡಿಯನ್ನು ಬಿಗಿ ಮಾಡಿದರೆ ಆಂಧ್ರದಲ್ಲಿ ವೈಆರ್‌ಎಸ್‌ ಕಾಂಗ್ರೆಸ್‌ನ ಜಗನ್‌ಮೋಹನ್ ರೆಡ್ಡಿ ಕಟ್ಟಿ ಹಾಕಬಹುದು. ರೆಡ್ಡಿ ಮತ್ತು ಜಗನ್‌ ಒಳ ವ್ಯವಹಾರಗಳನ್ನೂ ಮಟ್ಟ ಹಾಕಬಹುದು’ ಎಂದು ಹೇಳಿದರೆಂದು ಮೂಲಗಳು ತಿಳಿಸಿವೆ.

ADVERTISEMENT

ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕುಮಾರಸ್ವಾಮಿ, ‘ರೆಡ್ಡಿ ವಿರುದ್ಧ ರಾಜಕೀಯ ದ್ವೇಷ ತೀರಿಸಿಕೊಳ್ಳುತ್ತಿಲ್ಲ.ವಂಚನೆ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿದ್ದು, ಪೊಲೀಸರಿಗೆ ತನಿಖೆಯ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇನೆ. ತನಿಖೆಯ ಯಾವ ಹಂತದಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.