ADVERTISEMENT

ಬಿಎಸ್‌ವೈ ಪ್ಯಾಕೇಜ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 15 ಮೇ 2020, 19:33 IST
Last Updated 15 ಮೇ 2020, 19:33 IST
   

ಬೆಂಗಳೂರು: ಲಾಕ್‌ಡೌನ್‌, ಆರ್ಥಿಕ ಸಂಕಷ್ಟದ ಮಧ್ಯೆಯೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶ್ರಮಿಕ ವರ್ಗ, ಕಾರ್ಮಿಕರು ಮತ್ತು ರೈತರಿಗೆ ಮೂರು ವಿಶೇಷ ಆರ್ಥಿಕ ಪ್ಯಾಕೇಜ್‌
ಗಳನ್ನು ಘೋಷಿಸಿರುವುದು, ಅವರ ಜನಪರ ಕಾಳಜಿಗೆ ಸಾಕ್ಷಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಬಯಲು ಸೀಮೆಯಲ್ಲಿ ಮೆಕ್ಕೆ ಜೋಳ ಬೆಳೆಯುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ 10 ಲಕ್ಷ ರೈತರಿದ್ದು, ಪ್ರತಿಯೊಬ್ಬ ರೈತನಿಗೂ ₹5,000 ನೀಡಲಾಗುವುದು. ಇದರಿಂದ ರೈತರಿಗೆ ಸಣ್ಣ ಪುಟ್ಟ ಕೆಲಸಗಳಿಗೆ ಸಹಾಯಕವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಹಣ್ಣು– ತರಕಾರಿ ಬೆಳೆಗಾರರಿಗೆ ₹137 ಕೋಟಿ ಪ್ಯಾಕೇಜ್‌, 10 ಬಗೆಯ ಹಣ್ಣು– ತರಕಾರಿಗಳನ್ನು ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹15,000 ಪರಿಹಾರ ನೀಡಲಾಗುತ್ತದೆ ಎಂದರು.

ADVERTISEMENT

ಆಶಾ ಕಾರ್ಯಕರ್ತೆಯರಿಗೆ ₹3,000 ಪ್ರೋತ್ಸಾಹ ಧನ ನೀಡಿರುವುದು, ಅವರಿಗೆ ಗೌರವ ನೀಡಿದಂತಾಗಿದೆ. ಮುಖ್ಯಮಂತ್ರಿಯವರು ಎಲ್ಲ ವರ್ಗಕ್ಕೂ ಸಾಮಾಜಿಕ ನ್ಯಾಯ ಒದಗಿಸಿ ದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.