ಬೆಂಗಳೂರು: ಸಿಂದಗಿ ಮತ್ತು ಹಾನಗಲ್ನಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಉಪಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ನಳಿನ್ ಹೇಳಿರುವುದಾಗಿ ಬಿಜೆಪಿ ಟ್ವೀಟ್ ಮಾಡಿದೆ.
‘ಕಲಬುರ್ಗಿ, ಹುಬ್ಬಳ್ಳಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ನಮ್ಮ ವಿಜಯಯಾತ್ರೆಯ ಸಂಕೇತ. ಮುಂದಿನ ಎರಡು ಉಪಚುನಾವಣೆಯಲ್ಲೂ ನಾವು ಗೆಲ್ಲುತ್ತೇವೆ. ಆದರೆ ಕಾಂಗ್ರೆಸ್ ನಾಯಕರು ಸೋಲಿನ ಭೀತಿಯಿಂದ ಜಾತಿ ರಾಜಕಾರಣ ಮಾಡುತ್ತಿದ್ದಾರೆ’ ಎಂದು ನಳಿನ್ ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.