ADVERTISEMENT

ಮಾದರಿ ರಾಜ್ಯವಾಗಿಸಲು ಒಟ್ಟಾಗಿ ಶ್ರಮಿಸೋಣ: ಬಿ.ಎಸ್‌.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 20:00 IST
Last Updated 16 ಜನವರಿ 2020, 20:00 IST
ನಳಿನ್ ಕುಮಾರ್‌ ಕಟೀಲ್‌ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಚಿವ ಜಗದೀಶ ಶೆಟ್ಟರ್‌, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಸಚಿವ ಸಿ.ಟಿ.ರವಿ, ಕೆಂದ್ರ ಸಚಿವ ಡಿ.ವಿ.ಸದಾನಂದಗೌಡ ಮತ್ತು ಉಪಮುಖ್ಯಮಂತ್ರಿ ಗೋವಿಂದಕಾರಜೋಳ.
ನಳಿನ್ ಕುಮಾರ್‌ ಕಟೀಲ್‌ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಚಿವ ಜಗದೀಶ ಶೆಟ್ಟರ್‌, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಸಚಿವ ಸಿ.ಟಿ.ರವಿ, ಕೆಂದ್ರ ಸಚಿವ ಡಿ.ವಿ.ಸದಾನಂದಗೌಡ ಮತ್ತು ಉಪಮುಖ್ಯಮಂತ್ರಿ ಗೋವಿಂದಕಾರಜೋಳ.   

ಬೆಂಗಳೂರು: ‘ಮುಂದಿನ ಮೂರು ವರ್ಷ ರಾಜ್ಯದಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಕಟ್ಟುವ ಸವಾಲು ಮತ್ತು ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ನಳಿನ್‌ ಅವರು ಅಧ್ಯಕ್ಷರಾಗಿ ಇದನ್ನು ಸಮರ್ಥವಾಗಿ ನಿಭಾಯಿಸಬಲ್ಲರು ಎಂದು ಅವರು ನಗರದ ಅರಮನೆ
ಮೈದಾನದಲ್ಲಿ ಗುರುವಾರ ಪಕ್ಷದನೂತನ ಅಧ್ಯಕ್ಷ ನಳಿನ್‌ಕುಮಾರ್‌ಕಟೀಲ್‌ ಅವರ ಅಭಿನಂದನಾ ಸಮಾರಂಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

‘ಮುಂದಿನ ಮೂರು ವರ್ಷಗಳಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವಾಗಿ ಮಾಡಲು ಎಲ್ಲ ರೀತಿಯ ಶ್ರಮ ಹಾಕಬೇಕು. ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ರೈತರಿಗೆ ಹಲವು ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗುವುದು’ ಎಂದು ಅವರು ಹೇಳಿದರು..

ADVERTISEMENT

ಪರಿವಾರಕ್ಕೆ ಮೀಸಲು: ಬಿಜೆಪಿಯಲ್ಲಿ ಅನೇಕರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನ ಕೇವಲ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರಿಗೆ ಮೀಸಲು. ಬೇರೆಯವರುಆ ಹುದ್ದೆಗೆ ಏರಲು ಸಾಧ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.