ಬೆಂಗಳೂರು: ‘ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪರಾಧಿಗಳಿಗೆ ನಡುಕ ಹುಟ್ಟಿಸಿರುವ ಮಾದರಿಯಲ್ಲೇ ಡ್ರಗ್ಸ್ ಜಾಲದ ವಿರುದ್ಧದ ಕಾರ್ಯಾಚರಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಲಸ ಮಾಡುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವಿಟ್ಟರ್‌ನಲ್ಲಿ ಶ್ಲಾಘಿಸಿದ್ದಾರೆ.
‘ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಪೊಲೀಸರು ಡ್ರಗ್ಸ್ ಜಾಲದ ವಿರುದ್ಧ ಅಕ್ಷರಶಃ ಸಮರ ಸಾರಿದ್ದಾರೆ’ ಎಂದು ಭಾನುವಾರ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.