ADVERTISEMENT

ಕಾಗವಾಡದಲ್ಲಿ ಕಾಗೆ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2019, 6:02 IST
Last Updated 18 ನವೆಂಬರ್ 2019, 6:02 IST
   

ಬೆಳಗಾವಿ: ಕಾಗವಾಡ ಮತ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಭರಮಗೌಡ (ರಾಜು) ಕಾಗೆ ಸೋಮವಾರ ನಾಮಪತ್ರ ಸಲ್ಲಿಸಿದರು.

ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದ ಅವರು ಅಥಣಿಯ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗೆ ಉಮೇದುವಾರಿಕೆ ಸಲ್ಲಿಸಿದರು.

ಬಿಜೆಪಿ ಟಿಕೆಟ್ ದೊರೆಯದೇ ಇರುವುದರಿಂದ ಅವರು ಕಾಂಗ್ರೆಸ್ ಸೇರಿ ಆ ಪಕ್ಷದ ಟಿಕೆಟ್ ಪಡೆದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.