ADVERTISEMENT

ಮೆಟ್ರೊ: ಹೊಸ ಎಫ್‌ಎಫ್‌ಸಿ ರಚನೆಗೆ ಅಶೋಕ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 16:21 IST
Last Updated 7 ಫೆಬ್ರುವರಿ 2026, 16:21 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ‘ನಮ್ಮ ಮೆಟ್ರೊದಲ್ಲಿ ಭಾರತದಲ್ಲೇ ಅತ್ಯಂತ ದುಬಾರಿ ದರವಿದೆ. ಮತ್ತೊಂದು ದರ ಏರಿಕೆಯಿಂದ ಲಕ್ಷಾಂತರ ಪ್ರಯಾಣಿಕರಿಗೆ ಬರೆ ಎಳೆದಂತಾಗುತ್ತದೆ. ದರ ನಿಗದಿ ಸಮಿತಿಯಲ್ಲಿನ ಲೋಪದೋಷಗಳ ಬಗ್ಗೆ ಪರಿಶೀಲಿಸುವುದಾಗಿ ಮನೋಹರ ಲಾಲ್ ಖಟ್ಟರ್‌ ತಿಳಿಸಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದ್ದಾರೆ.

‘ಎಕ್ಸ್‌’ನಲ್ಲಿ ಈ ಕುರಿತು ಹೇಳಿಕೆ ನೀಡಿರುವ ಅವರು, ‘ದರಗಳ ವೈಜ್ಞಾನಿಕ ಪರಿಷ್ಕರಣೆಗೆ ಹೊಸ ಸಮಿತಿ ರಚಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ. ರಾಜ್ಯ ಸರ್ಕಾರ ತನ್ನ ಹಟಮಾರಿ ಧೋರಣೆ ಬಿಟ್ಟು ಹೊಸ ಎಫ್‌ಎಫ್‌ಸಿ ರಚಿಸುವ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು. ಮೆಟ್ರೊ ಪ್ರಯಾಣವು ಪ್ರತಿಯೊಬ್ಬ ನಾಗರಿಕನಿಗೂ ಕೈಗೆಟುಕುವ ದರದಲ್ಲಿ ಸಿಗುವವರೆಗೂ ಹಾಗೂ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT