ಸಿದ್ದರಾಮಯ್ಯ, ನರೇಂದ್ರ ಮೋದಿ, ಡಿ.ಕೆ.ಶಿವಕುಮಾರ್
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ನಮ್ಮ ಮೆಟ್ರೊ ನಿರ್ಮಿಸಲಾಗುತ್ತಿದೆ. ಅದರಲ್ಲಿ ರಾಜ್ಯದ್ದೇ ಹೆಚ್ಚು ಪಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
‘ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಬೆಂಗಳೂರು ಮೆಟ್ರೊ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಯೋಜನೆ’ ಎಂದು ಹೇಳಿದರು.
‘ಬೆಂಗಳೂರು ಮೆಟ್ರೊಗೆ ಈವರೆಗೆ ರಾಜ್ಯ ಸರ್ಕಾರವು ₹25,379 ಕೋಟಿ ವಚ್ಚ ಮಾಡಿದ್ದರೆ, ಕೇಂದ್ರ ಸರ್ಕಾರವು ₹7,468.86 ಕೋಟಿ ವೆಚ್ಚ ಮಾಡಿದೆ. ಕೇಂದ್ರವು ನಮಗೆ ಸಾಲವನ್ನು ನೀಡಿದೆ. ಅದನ್ನು ಬಡ್ಡಿ ಸಮೇತ ವಾಪಸ್ ಮಾಡಬೇಕಿದೆ. ಈಗಾಗಲೇ ₹3,987 ಕೋಟಿ ಸಾಲವನ್ನು ವಾಪಸ್ ಮಾಡಿದ್ದೇವೆ’ ಎಂದರು.
‘ಮೆಟ್ರೊ 3ಎ ಹಂತದ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ಧವಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅದಕ್ಕೆ ಶೀಘ್ರವೇ ಅನುಮತಿ ನೀಡಿ, ಅಗತ್ಯ ನೆರವು ಒದಗಿಸಬೇಕು’ ಎಂದು ಪ್ರಧಾನಿ ಮೋದಿ ಅವರನ್ನು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.