ಬೆಂಗಳೂರು: ಲಾಕ್‍ಡೌನ್ ಹಿನ್ನೆಲೆ ಮೇ 3ರವರೆಗೆ ನಮ್ಮ ಮೆಟ್ರೊ ಸೇವೆ ಸ್ಥಗಿತಗೊಳಿಸಿರುವುದಾಗಿ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್ ಸಿಎಲ್) ತಿಳಿಸಿದೆ.
ರೈಲುಗಳನ್ನು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಬೆಳಿಗ್ಗೆ ಹಾಗೂ ಸಂಜೆ ವೇಳೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಪರೀಕ್ಷಾರ್ಥವಾಗಿ ಒಂದು ರೈಲು ಸಂಚರಿಸಲಿದೆ. ನಿರ್ವಹಣಾ ಸಿಬ್ಬಂದಿ ಮಾತ್ರ ಇದರಲ್ಲಿ ಸಂಚರಿಸಲಿದ್ದಾರೆ. ಮೇ 3ರವರೆಗೂ ಮೆಟ್ರೊ ನಿಲ್ದಾಣಗಳ ಬಳಿಯ ಪ್ರಯಾಣಿಕರ ವಾಹನ ನಿಲುಗಡೆ ಸ್ಥಳಗಳನ್ನು ನಿರ್ಬಂಧಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.