ಬೆಂಗಳೂರು: ನರಹಳ್ಳಿ ಪ್ರತಿಷ್ಠಾನ ನೀಡುವ 2021ನೇ ಸಾಲಿನ ‘ನರಹಳ್ಳಿ ಪ್ರಶಸ್ತಿ’ಗೆ ವಿಮರ್ಶಕ ಹಾಗೂ ಸಂಶೋಧಕ ಜಿ.ಎನ್.ಉಪಾಧ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಉಡುಪಿಯವರಾದ ಉಪಾಧ್ಯ ಅವರು ಮುಂಬೈ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಶಸ್ತಿಯು ₹15 ಸಾವಿರ ನಗದು ಹಾಗೂ ಫಲಕ ಒಳಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.