ADVERTISEMENT

VIDEO:ಹಿಂದುಳಿದವರ ಸಮೀಕ್ಷೆ ಮಾತ್ರವಲ್ಲ,ಸುಧಾ–ಮೂರ್ತಿಗೆ ತಪ್ಪು ಮಾಹಿತಿ ಇದೆ:ಸಿಎಂ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 13:50 IST
Last Updated 17 ಅಕ್ಟೋಬರ್ 2025, 13:50 IST

‘ಇನ್ಫೊಸಿಸ್‌ನವರೇನು ಬೃಹಸ್ಪತಿಗಳಾ? ನಾವು ನಡೆಸುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ. ಅವರಿಗೆ ಅದು ಅರ್ಥವಾಗದಿದ್ದರೆ ನಾವೇನು ಮಾಡಕ್ಕಾಗುತ್ತೆ?’ – ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ’ ಎಂಬ ಇನ್ಫೊಸಿಸ್‌ನ ಸಹ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ರೀತಿ ಪ್ರತಿಕ್ರಿಯಿಸಿದರು. ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಇದು ಹಿಂದುಳಿದವರ ಸಮೀಕ್ಷೆಯಲ್ಲ. ಇಡೀ ರಾಜ್ಯದ ಎಲ್ಲ ಏಳು ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ. ನಾರಾಯಣಮೂರ್ತಿ, ಸುಧಾ ಅವರಂಥವರು ಇದು ಹಿಂದುಳಿದವರ ಸಮೀಕ್ಷೆ ಎಂಬ ಭಾವನೆ ಹೊಂದಿದ್ದರೆ ಅದು ತಪ್ಪು. ಮುಂದೆ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತದೆ, ಆಗ ಇವರು ಏನು ಉತ್ತರ ಹೇಳುತ್ತಾರೆ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.