ADVERTISEMENT

ಎಂಇಎಸ್‌ ನಿಷೇಧಕ್ಕೆ ಆಗ್ರಹ: ಶಿವಸೇನೆ ಧ್ವಜ ಸುಟ್ಟು ಕರವೇ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 19:46 IST
Last Updated 20 ಡಿಸೆಂಬರ್ 2021, 19:46 IST
ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡ ಬಣ) ಕಾರ್ಯಕರ್ತರು ಮೆಜೆಸ್ಟಿಕ್‌ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ಎದುರು ಶಿವಸೇನೆ ಧ್ವಜ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು– ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡ ಬಣ) ಕಾರ್ಯಕರ್ತರು ಮೆಜೆಸ್ಟಿಕ್‌ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ಎದುರು ಶಿವಸೇನೆ ಧ್ವಜ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು– ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.   

ಬೆಂಗಳೂರು: ಎಂಇಎಸ್‌ ಕೃತ್ಯವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡ ಬಣ) ಕಾರ್ಯಕರ್ತರು ಶಿವಸೇನೆ ಧ್ವಜಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಸೇರಿದ್ದ ನೂರಾರು ಕಾರ್ಯಕರ್ತರು ಎಂಇಎಸ್‌ಗೆ ಸೇರಿದ ಕೆಲ ಕಿಡಿಗೇಡಿಗಳ ದುಷ್ಕೃತ್ಯವನ್ನು ಖಂಡಿಸಿದರು. ಎಂಇಎಸ್‌. ನಿಷೇಧಿಸುವಂತೆಯೂ ಆಗ್ರಹಿಸಿದರು.

‘ಎಂಇಎಸ್‌.ಗೂಂಡಾಗಳಿಗೆ ಧಿಕ್ಕಾರ’, ‘ಮಹಾರಾಷ್ಟ್ರ ಏಕೀಕರಣ ಸಂಘಟನೆಗೆ ಧಿಕ್ಕಾರ’, ‘ಬೆಳಗಾವಿ ಎಂದೆಂದಿಗೂ ಕನ್ನಡಿಗರ ಆಸ್ತಿ’, ‘ದೇಶದ್ರೋಹಿ ಎಂಇಎಸ್‌ ಹಾಗೂ ಶಿವಸೇನೆ ಸಂಘಟನೆಗಳನ್ನು ಬಹಿಷ್ಕರಿಸಿ’ ಎಂಬ ಘೋಷಣೆಗಳನ್ನು ಕೂಗಿದ ಪ್ರತಿಭಟನಕಾರರು, ಶಿವಸೇನೆ ಧ್ವಜವನ್ನು ನೆಲಕ್ಕೆ ಹಾಕಿ ಕಾಲಿನಿಂದ ತುಳಿದರು.

ADVERTISEMENT

ಪ್ರತಿಭಟನಕಾರರು ಶಿವಸೇನೆ ಬಾವುಟಕ್ಕೆ ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ತಡೆಯಲು ಮುಂದಾದರು. ಈ ವೇಳೆ ವಾಗ್ವಾದ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ವಿರೋಧದ ನಡುವೆಯೂ ಕಾರ್ಯಕರ್ತರು ಶಿವಸೇನೆ ಬಾವುಟ ಸುಟ್ಟರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.