ADVERTISEMENT

ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕಾರ: ಎಚ್‌ಡಿಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 15:28 IST
Last Updated 15 ಜನವರಿ 2022, 15:28 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗೆ ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದನ್ನು ಖಂಡಿಸಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ‘ಇದು ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅವಮಾನ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶನಿವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿದ ಮತ್ತು ಮನುಷ್ಯರೆಲ್ಲ ಒಂದೇ, ಒಂದೇ ಜಾತಿ, ಒಂದೇ ಮತ ಮತ್ತು ಒಬ್ಬನೇ ದೇವರು ಎಂಬ ಸಂದೇಶದೊಂದಿಗೆ ಅರಿವಿನ ಬೆಳಕು ಮೂಡಿಸಿದವರು ನಾರಾಯಣ ಗುರುಗಳು. ಅವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕರಿಸಿರುವುದು ಕ್ಷಮಾರ್ಹವಲ್ಲದ ತಪ್ಪು’ ಎಂದಿದ್ದಾರೆ.

ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ ಇದು. ಆಯ್ಕೆ ಸಮಿತಿಯಲ್ಲಿ ಇಂಥಹ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ. ಕೂಡಲೇ ಈ ತಪ್ಪನ್ನು ಸರಿಪಡಿಸಬೇಕು. ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆ ಮಾಡಲು ಕೇಂದ್ರದ ಸಂಬಂಧಪಟ್ಟ ಸಚಿವಾಲಯದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.