ADVERTISEMENT

ನಾರಾಯಣಸ್ವಾಮಿಗೆ ‘ಶಾ.ಬಾಲೂರಾವ್ ಅನುವಾದ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2019, 20:04 IST
Last Updated 15 ಅಕ್ಟೋಬರ್ 2019, 20:04 IST
ನಾರಾಯಣಸ್ವಾಮಿ
ನಾರಾಯಣಸ್ವಾಮಿ   

ಶಿಡ್ಲಘಟ್ಟ: ತಾಲ್ಲೂಕಿನ ಭಕ್ತರ ಹಳ್ಳಿಯ ಬಿ.ಎಂ.ವಿ ವಿದ್ಯಾಸಂಸ್ಥೆಯ ಟ್ರಸ್ಟಿ ಸಂತೆ ನಾರಾಯಣಸ್ವಾಮಿ ಅವರು ಮೊಘಲ್ ರಾಜಕುಮಾರಿ ಕುರಿತಂತೆ ಬರೆದಿರುವ ‘ಜಹನಾರಾ’ ಕೃತಿಗೆ ಬಿ.ಎಂ.ಶ್ರೀ ಪ್ರತಿಷ್ಠಾನದ ‘ಶಾ.ಬಾಲೂರಾವ್ ಅನುವಾದ’ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಅ. 20ರಂದು ಬೆಂಗಳೂರಿನಲ್ಲಿ ಪ್ರತಿಷ್ಠಾನದ ಎಂ.ವಿ.ಸಿ ಸಭಾಂಗಣದಲ್ಲಿ ನಡೆಯಲಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿ ₹ 25 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ.

ಸಮಿತಿ ರಚನೆ

ADVERTISEMENT

ಬೆಂಗಳೂರು ವರದಿ: ಸಾರಿಗೆ ಸಂಸ್ಥೆಗಳ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವ ಕುರಿತ ಸಾಧಕ–ಬಾಧಕ ಪರಿಶೀಲಿಸಿ ವರದಿ ನೀಡಲು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಸರ್ಕಾರವು ಸಮಿತಿ ರಚಿಸಿದೆ.

ಸೂಕ್ತ ಶಿಫಾರಸುಗಳೊಂದಿಗೆ ವರದಿ ನೀಡಬೇಕು ಎಂದು ಸರ್ಕಾರವು ಸಮಿತಿಗೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.