ಬೆಂಗಳೂರು: ‘ಸಿದ್ದರಾಮಯ್ಯ ಅವರೇ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿಯಾಗಲಿ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಲಿತರ ಹಕ್ಕುಗಳ ರಕ್ಷಣೆಯ ವಕ್ತಾರರು ಎಂದು ಹೇಳಿಕೊಳ್ಳುವ ಕಾಂಗ್ರೆಸ್ಸಿಗರು, ಆ ಸಮುದಾಯಕ್ಕೆ ಸೇರಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಬಿ.ವೈ.ವಿಜಯೇಂದ್ರ ಅವರು ಹೇಳಿದ್ದರು. ಅದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.
‘ಕಾಂಗ್ರೆಸ್ಸಿಗೆ ದಲಿತರು ಕೇವಲ ಮತಬ್ಯಾಂಕ್. ಅವರನ್ನು ಕಾಂಗ್ರೆಸ್ ಪಕ್ಷ ಗುಲಾಮರೆಂದು ತಿಳಿದಿದೆ. ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲು ಕಾಂಗ್ರೆಸ್ಸಿಗೆ ಮನಸ್ಸು ಇಲ್ಲದೇ ಇದ್ದರೆ, ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯ ಅವರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.