ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಧಾರ್ ಕಾರ್ಡ್ ಜೋಡಣೆಯಾಗದ ಕಾರ್ಮಿಕರ ಜಾಬ್ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್ ಸ್ಪಷ್ಟಪಡಿಸಿದರು.
ಲೋಕಸಭೆಯಲ್ಲಿ ರಾಯಚೂರು ಸಂಸದ ಜಿ.ಕುಮಾರ್ ನಾಯ್ಕ್ ಮಂಗಳವಾರ ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ‘ಈ ವರ್ಷದ ಜನವರಿಯಿಂದ ಕಾರ್ಮಿಕರಿಗೆ ವೇತನ ಪಾವತಿಗೆ ಆಧಾರ್ ಕಡ್ಡಾಯಗೊಳಿಸಲಾಗಿದೆ. ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಉದ್ದೇಶ ಇದರ ಹಿಂದಿದೆ’ ಎಂದರು.
‘ದೇಶದಲ್ಲಿ 2024–25ನೇ ಆರ್ಥಿಕ ವರ್ಷದಲ್ಲಿ 35.04 ಲಕ್ಷ ಜಾಬ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ನಕಲಿ ಜಾಬ್ ಕಾರ್ಡ್, ಗ್ರಾಮಸ್ಥರು ಕೆಲಸ ಮಾಡಲು ಇಷ್ಟ ಪಡದೇ ಇರುವುದು, ಕುಟುಂಬದವರು ಗ್ರಾಮದಿಂದ ಶಾಶ್ವತವಾಗಿ ಸ್ಥಳಾಂತರ ಆಗಿರುವುದು ಇದಕ್ಕೆ ಕಾರಣ. ಈ ವರ್ಷದಲ್ಲಿ ಹೊಸದಾಗಿ 36.21 ಲಕ್ಷ ಜಾಬ್ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.