ADVERTISEMENT

ಪ್ರಧಾನಿ ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ: ಕಾಂಗ್ರೆಸ್‌ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಸೆಪ್ಟೆಂಬರ್ 2021, 9:27 IST
Last Updated 17 ಸೆಪ್ಟೆಂಬರ್ 2021, 9:27 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಬೆಂಗಳೂರು: ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಕುರಿತು ಶುಕ್ರವಾರ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, 'ದುಡಿಯಲಾರದ ಸೋಂಬೇರಿತನದಲ್ಲಿ ಸ್ವಾಭಿಮಾನ ಮರೆತು ಮೋದಿ ಭಿಕ್ಷೆ ಬೇಡಿರಬಹುದು, ಆದರೆ ದೇಶದ ಸ್ವಾಭಿಮಾನಿ ಯುವಜನತೆ ಭಿಕ್ಷೆ ಬೇಡಲಾರರು' ಎಂದು ವಾಗ್ದಾಳಿ ನಡೆಸಿದೆ.

ಬದುಕಲು ಜನತೆಗೆ ಉದ್ಯೋಗ ಬೇಕಿದೆ ಎಂದಿರುವ ಕಾಂಗ್ರೆಸ್‌ #NationalUnemploymentDay ಎಂಬ ಹ್ಯಾಶ್‌ಟ್ಯಾಗ್‌ ಬಳಸಿ ಟ್ವೀಟ್‌ ಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.