ADVERTISEMENT

ತುಮಕೂರಿನಲ್ಲಿ ಮೋದಿ: ಲೈವ್ ವಿಡಿಯೊ ಇಲ್ಲಿ ವೀಕ್ಷಿಸಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 9:04 IST
Last Updated 2 ಜನವರಿ 2020, 9:04 IST
   

ತುಮಕೂರು: ಇಲ್ಲಿನಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಸಂಜೆ ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಕೃಷಿಕರಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮಕ್ಕಾಗಿ ಗುರುವಾರ ತುಮಕೂರಿಗೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಲೈವ್ ವೀಡಿಯೊ ಇಲ್ಲಿದೆ. ಕೃಪೆ: ಡಿಡಿ ಚಂದನ

ಪ್ರಧಾನಿ ಮೋದಿ ಗುರುವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯ ಗದ್ದುಗೆಯ ದರ್ಶನ ಪಡೆದರು. ನಂತರ ಮಠದ ಮಕ್ಕಳ ಜತೆ ಸಂವಾದ, ಮಠದ ಸ್ವಾಮೀಜಿ ಸಿದ್ಧಲಿಂಗ ಶ್ರೀಗಳಿಂದ ಆಶೀರ್ವಾದ, ಡಾ.ಶಿವಕುಮಾರ ಸ್ವಾಮೀಜಿ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ಮತ್ತು ಮಠದ ಆವರಣದಲ್ಲಿ ಬಿಲ್ವಪತ್ರೆ ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲುಗೊಳ್ಳಲಿದ್ದಾರೆ. ಬಳಿಕ ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕೃಷಿ ಕರ್ಮಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.