ADVERTISEMENT

ಯಾದಗಿರಿ: ಕೊಡೇಕಲ್‌ಗೆ ಪ್ರಧಾನಿ ಆಗಮನ, ಭರ್ಜರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 7:08 IST
Last Updated 19 ಜನವರಿ 2023, 7:08 IST
   

ಯಾದಗಿರಿ: ₹ 10 ಸಾವಿರ ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಲು ಹುಣಸಗಿ ತಾಲ್ಲೂಕಿನ ಕೊಡೇಕಲ್ ಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಭರ್ಜರಿ ಸ್ವಾಗತ ಕೊರಲಾಯಿತು.‌

ಗುರುವಾರ ಬೆಳಿಗ್ಗೆ 11:50 ಕ್ಕೆ ಕೊಡೇಕಲ್ ಹೆಲಿಪ್ಯಾಡ್ ಗೆ ಆಗಮಿಸಿದ ಪ್ರಧಾನಿಯವರನ್ನು ಜಿಲ್ಲಾಡಳಿದ ವತಿಯಿಂದ ಸ್ವಾಗತ ಕೊರಲಾಯಿತು.

ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಜನರು ಸೇರಿದ್ದಾರೆ. ಅವರನ್ನು ವೇದಿಕೆಗೆ ಕಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ADVERTISEMENT

ಪ್ರಧಾನಿಯವರ ಜೊತೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ ಖೂಬಾ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಸುರಪುರ ಶಾಸಕ ರಾಜೂಗೌಡ ಸೇರಿದಂತೆ ಹಲವರಿದ್ದರು.

ಮೋದಿಯವರನ್ನು ಕಂಡು ಜನತೆ ಮೋದಿ ಮೋದಿ ಎಂದು ಜೈಕಾರ ಹಾಕಿದರು‌.‌

ಕಾರ್ಯಕ್ರಮ ಪ್ರಾರಂಭ
ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೇಕಲ್‌ನಲ್ಲಿ ₹10,813 ಕೋಟಿ ಕಾಮಗಾರಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದಾರೆ. ಕಾರ್ಯಕ್ರಮ ಶುರುವಾಗಿದೆ.

ಅವರೊಂದಿಗೆ ರಾಜ್ಯಪಾಲ ಥಾವರಚಂದ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವ ಗೋವಿಂದ ಕಾರಜೋಳ, ಸುರಪುರ ಶಾಸಕ ರಾಜೂಗೌಡ ಮತ್ತು ಪ್ರಮುಖರು ಪಾಲ್ಗೊಂಡಿದ್ದಾರೆ.

ಸ್ಕಾಡಾ ತಂತ್ರಜ್ಞಾನದ ಮೂಲಕ ಬಸವಸಾಗರ ಜಲಾಶಯದ ಕಾಲುವೆಯ ಗೇಟ್‌ಗಳನ್ನು ಕಂಟ್ರೋಲ್ ರೂಂ ಮೂಲಕ ನಿಯಂತ್ರಿಸುವ ಯೋಜನೆಯನ್ನು ಉದ್ಘಾಟಿಸುವುದರ ಜೊತೆಗೆ ಎಕ್ಸ್ಪ್ರೆಸ್ ವೇ, ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಪ್ರಧಾನಿಯವರು ಚಾಲನೆ ನೀಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.