ಬೆಂಗಳೂರು: ‘ತ್ರಿವರ್ಣ ಧ್ವಜವನ್ನು ಮನೆ ಮನೆಗೆ ತಲುಪಿಸಿ ಯುವಜನರಿಗೆ ಸ್ವಾತಂತ್ರ್ಯದ ಮಹತ್ವವನ್ನು ಪ್ರಧಾನಿ ನರೇಂದ್ರ ಮೋದಿ ಮನವರಿಕೆ ಮಾಡಿದ್ದಾರೆ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.
‘ಆರ್‌ಎಸ್‌ಎಸ್ ಇಲ್ಲದೇ ಹೋಗಿದ್ದರೆ ನಾವು ಪಾಕಿಸ್ತಾನ ಅಥವಾ ಬಾಂಗ್ಲಾದೇಶ ಆಗಿರುತ್ತಿದ್ದೆವೋ ಏನೋ’ ಎಂದರು.
ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಮಾತನಾಡಿ, ‘ಜಾತಿ, ಧರ್ಮ, ಭಾಷೆ ಮೊದಲು ದೇಶ ನಂತರ ಎಂಬುದು ಸರಿಯಲ್ಲ. ಇದರಿಂದ ದೇಶ ಏಕತೆಯಿಂದ ಉಳಿಯಲು ಸಾಧ್ಯವಾಗದು’ ಎಂದರು.
ಸಂಸದ ಪಿ.ಸಿ. ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ವಿಧಾನಪರಿಷತ್ ಮಾಜಿ ಸದಸ್ಯ ಎ.ಎಚ್. ಶಿವಯೋಗಿಸ್ವಾಮಿ, ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.