
ಸ್ಯಾಂಡ್ ಥೀಂ ಉಡುಪಿ ತಂಡದವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರಿ ಮಲ್ಪೆ ಕಡಲ ತೀರದಲ್ಲಿ ಮರಳು ಶಿಲ್ಪ ರಚಿಸಿದರು. ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಉಜ್ವಲ್ ಅವರಿಂದ ಕಲಾಕೃತಿ ಮೂಡಿ ಬಂದಿದೆ
ಉಡುಪಿ: ಪರ್ಯಾಯ ಪುತ್ತಿಗೆಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಬರಲಿದ್ದಾರೆ.
ಅವರ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ.
ಬೆಳಗ್ಗೆ 7.25ಕ್ಕೆ ದೆಹಲಿಯಿಂದ ತೆರಳಿರುವ ಅವರು 10.30ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಲಿದ್ದಾರೆ.
11.30ಕ್ಕೆ ಒಂದೂವರೆ ಕಿ.ಮೀ ರೋಡ್ ಶೋ ನಡೆಸಿದ ಬಳಿ ಶ್ರೀಕೃಷ್ಣಮಠಕ್ಕೆ ತೆರಳುವವರು. ನಂತರ ಅಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ಭೇಟಿಯ ಕಾರಣ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.