ADVERTISEMENT

ಸಾರಾಪುರ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 11:18 IST
Last Updated 18 ಡಿಸೆಂಬರ್ 2019, 11:18 IST

ಬೆಳಗಾವಿ: ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಲ್ಲಿ ಮನೆಗಳ ನಿರ್ಮಾಣ ಕಾರ್ಯದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿರುವುದನ್ನು ಆಧರಿಸಿ ಕೇಂದ್ರ ಸರ್ಕಾರದಿಂದ ನೀಡಲಾಗುವ ರಾಷ್ಟ್ರೀಯ ಪುರಸ್ಕಾರಕ್ಕೆ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಾರಾಪುರ ಗ್ರಾಮ ಪಂಚಾಯಿತಿಗೆ ಭಾಜನವಾಗಿದೆ.

ಗುರುವಾರ (ಡಿ. 19) ನವದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪುರಸ್ಕಾರ ಪ್ರದಾನ ಮಾಡಲಿದ್ದಾರೆ. ಪಂಚಾಯಿತಿ ಅಧ್ಯಕ್ಷ ಹಾಗೂ ಪಿಡಿಒ ಪುರಸ್ಕಾರ ಸ್ವೀಕರಿಸಲಿದ್ದಾರೆ.

‘ಯೋಜನೆಯಡಿ ಮಂಜೂರಾದ ಮನೆಗಳನ್ನು ನಿಗದಿಪಡಿಸಿದ ಕಾಲಾವಧಿಯಲ್ಲೇ ತಲುಪಲಾಗಿದೆ. 2016ರಿಂದ 2019ರವರೆಗೆ ಮನೆಗಳ ನಿರ್ಮಾಣದಲ್ಲಿ ಶೇ 100 ಸಾಧನೆ ಮಾಡಿದ್ದಕ್ಕಾಗಿ ಪುರಸ್ಕಾರ ನೀಡಲಾಗುತ್ತಿದೆ. ಮಂಜೂರಾಗಿದ್ದ 174 ಮನೆಗಳು ಪೂರ್ಣಗೊಂಡಿವೆ. 17 ವಿವಿಧ ಹಂತದಲ್ಲಿವೆ ಹಾಗೂ ಪ್ರಸಕ್ತ ವರ್ಷ ಮಂಜೂರಾದ 12 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ಇದನ್ನು ಆಧರಿಸಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.