ಬೆಂಗಳೂರು: ‘23 ವರ್ಷಗಳ ನಂತರ ಕರ್ನಾಟಕದಲ್ಲಿ ಅಖಿಲ ಭಾರತ ಸಭಾಧ್ಯಕ್ಷರ ಸಮಾವೇಶ ನಡೆಸುವ ಅವಕಾಶ ಒದಗಿಬಂದಿದೆ’ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಸಭಾಧ್ಯಕ್ಷರ ಸಮಾವೇಶವನ್ನು ನಡೆಸಲು ಅವಕಾಶ ನೀಡಿ ಎಂದು ಲೋಕಸಭಾ ಸ್ಪೀಕರ್‌ಗೆ ಹಲವು ಬಾರಿ ಪತ್ರ ಬರೆದಿದ್ದೆವು. ಅವರು ಈಗ ಅನುಮತಿ ನೀಡಿದ್ದಾರೆ’ ಎಂದರು.
‘ಲೋಕಸಭಾ ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್, ಎಲ್ಲ ರಾಜ್ಯಗಳ ವಿಧಾನ ಸಭಾಧ್ಯಕ್ಷರು, ಉಪ ಸಭಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿ 500ಕ್ಕೂ ಹೆಚ್ಚು ಮಂದಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ’ ಎಂದರು.
‘ಬೆಂಗಳೂರಿನಲ್ಲೇ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಸ್ಥಳ ಇನ್ನಷ್ಟೇ ನಿಗದಿ ಆಗಬೇಕು. ಸೆಪ್ಟೆಂಬರ್ 8ರಿಂದ 11ರವರೆಗೆ ನಾಲ್ಕು ದಿನ ಸಮಾವೇಶ ನಡೆಯಲಿದೆ. 8ರಂದು ಎಲ್ಲ ಪ್ರತಿನಿಧಿಗಳು ಇಲ್ಲಿಗೆ ಬರಲಿದ್ದಾರೆ. 9 ಮತ್ತು 10ರಂದು ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ. 11ರಂದು ಪ್ರತಿನಿಧಿಗಳನ್ನು ಪ್ರೇಕ್ಷಣೀಯ ಸ್ಥಳಕ್ಕೆ ಕರೆದೊಯ್ಯಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.