
ಪ್ರಜಾವಾಣಿ ವಾರ್ತೆ
ಮೈಸೂರು: ‘ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಒಳಗೊಳ್ಳದೆ ಏಕಪಕ್ಷೀಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ’ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಭಾನುವಾರ ಇಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ’ಬೇರುಗಳನ್ನೇ ಕಡೆಗಣಿಸಿ ಕೊಂಬೆಗಳನ್ನು ಸುಧಾರಿಸಲು ಹೊರಟರೆ ಪ್ರಯೋಜನ ಇಲ್ಲ. ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಶಿಕ್ಷಣ ನೀತಿ ಬಗ್ಗೆ ವಿಸ್ತೃತ ಚರ್ಚೆ ರಾಜ್ಯದೆಲ್ಲೆಡೆ ನಡೆಯಬೇಕಿತ್ತು’ ಎಂದರು.
ಶಾಸಕ ತನ್ವೀರ್ ಸೇಠ್, ‘ಉನ್ನತ ಶಿಕ್ಷಣ ಸಚಿವರು ತರಾತುರಿಯಲ್ಲಿ ಶಿಕ್ಷಣ
ನೀತಿ ಜಾರಿ ಮಾಡಲು ಹೊರಟಿರುವುದು ಸರಿಯಲ್ಲ. ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾತನ್ನು ಮರೆಯಬಾರದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.