ADVERTISEMENT

ರಾಷ್ಟ್ರೀಯ ಇಂಧನ ಸಂರಕ್ಷಣೆ ಪ್ರಶಸ್ತಿ 2024: ರಾಜ್ಯಕ್ಕೆ ಎರಡನೇ ಬಹುಮಾನ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2024, 15:27 IST
Last Updated 15 ಡಿಸೆಂಬರ್ 2024, 15:27 IST
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪಪ್ಯ್ಯ ಅವರ ಪ್ರಶಸ್ತಿ ಸ್ವೀಕರಿಸಿದರು.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪಪ್ಯ್ಯ ಅವರ ಪ್ರಶಸ್ತಿ ಸ್ವೀಕರಿಸಿದರು.   

ಬೆಂಗಳೂರು: ‘ರಾಷ್ಟ್ರೀಯ ಇಂಧನ ಸಂರಕ್ಷಣೆ ಪ್ರಶಸ್ತಿ 2024’ರಲ್ಲಿನ ರಾಜ್ಯ ಇಂಧನ ದಕ್ಷತೆಯ ಕಾರ್ಯಕ್ಷಮತೆ ಪ್ರಶಸ್ತಿಯ(ಎಸ್‌ಡಿಎ ಗ್ರೂಪ್‌1) ವಿಭಾಗದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ(ಕ್ರೆಡಲ್‌) ಎರಡನೇ ಬಹುಮಾನ ಪಡೆದುಕೊಂಡಿದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಶನಿವಾರ(ಡಿ.14)ರಂದು ಬ್ಯೂರೊ ಆಫ್ ಎನರ್ಜಿ ಎಫಿಷಿಯೆನ್ಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ರಾಜ್ಯದಾದ್ಯಂತ ಸುಸ್ಥಿರ ಇಂಧನ ಪದ್ಧತಿಗಳನ್ನು ಉತ್ತೇಜಿಸುವ ಕ್ರೆಡಲ್‌, ಈ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿರುವ ಇಂಧನ ದಕ್ಷತೆ ಯೋಜನೆಗಳನ್ನು ಗುರುತಿಸಿ ಕೇಂದ್ರ ಇಂಧನ ಸಚಿವಾಲಯ ಈ ಪ್ರಶಸ್ತಿ ನೀಡಿದೆ.

ADVERTISEMENT

ಇಂಧನ ದಕ್ಷತೆಗಾಗಿ ವಿವಿಧ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತು ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ಇಂಧನ ದಕ್ಷತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿ ಎರಡನೇ ಬಹುಮಾನ ದೊರೆತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನದ ಉಪಕ್ರಮಗಳಿಗೆ ನಮ್ಮ ಸರ್ಕಾರ ಒತ್ತು ನೀಡುತ್ತದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.