ADVERTISEMENT

ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಕೇಂದ್ರದಿಂದ ಬಹುಮಾನ

ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಬೆಳ್ಳಿ ಮಹೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2019, 20:25 IST
Last Updated 26 ಅಕ್ಟೋಬರ್ 2019, 20:25 IST

ಬೆಂಗಳೂರು:ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಜಾರಿಗೆ ತಂದಿರುವ ‘ಮಿಷನ್ ಇಂದ್ರಧನುಷ್’ ಯೋಜನೆಯಡಿ ರಾಜ್ಯದ ನಾಲ್ಕು ಜಿಲ್ಲೆಗಳು ಶೇ 90 ರಷ್ಟು ಸಾಧನೆ ಮಾಡಿದ್ದು, ಕೇಂದ್ರ ಸರ್ಕಾರ ಕೊಡುವ ಬಹುಮಾನಗಳಿಗೆ ಆಯ್ಕೆಯಾಗಿವೆ.

ಪಲ್ಸ್ ಪೋಲಿಯೊ ಕಾರ್ಯಕ್ರಮ 25 ವರ್ಷಗಳನ್ನು ಪೂರೈಸಿದೆ. ಇದರ ಅಂಗವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ನವದೆಹಲಿಯ ಅಂಬೇಡ್ಕರ್‌ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಅ.31ಕ್ಕೆ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಈ ಕಾರ್ಯಕ್ರಮದಲ್ಲಿ ಶೇ 90 ರಷ್ಟು ರೋಗನಿರೋಧಕ ವ್ಯಾಪ್ತಿಯನ್ನು ಪೂರೈಸಿದವರಿಗೆ ಬಹುಮಾನವನ್ನು ವಿತರಿಸಲಾಗುತ್ತದೆ.

ADVERTISEMENT

2017–18ನೇ ಸಾಲಿನಲ್ಲಿ‘ಮಿಷನ್ ಇಂದ್ರಧನುಷ್’ ಯೋಜನೆಯಡಿ ಬಾಗಲಕೋಟೆ, ಕಲಬುರ್ಗಿ, ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳು ಶೇ 90 ರಷ್ಟು ಸಾಧನೆ ಮಾಡಿದ್ದು, ಜಿಲ್ಲೆಯ ಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಿ, ಬಹುಮಾನವನ್ನು ಸ್ವೀಕರಿಸುವಂತೆ ಎನ್‌ಎಚ್‌ಎಂ ನಿರ್ದೇಶಕ ಮನೋಜ್‌ ಜಾಲಾನಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.