‘ಸಾರ್ವತ್ರಿಕ ಆರೋಗ್ಯ
ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ 2024–25ನೇ ಸಾಲಿನಲ್ಲಿ ಜೂನ್ 15ರ ವರೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ₹553 ಕೋಟಿ ಹಾಗೂ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿಯಲ್ಲಿ ₹14.38 ಕೋಟಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವ ಪ್ರತಾಪ್ ರಾವ್ ಜಾಧವ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಸಚಿವರು, ‘ರಾಜ್ಯದಲ್ಲಿ 2023ನೇ ಸಾಲಿನಲ್ಲಿ 2260 ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದರೆ, ಈ ವರ್ಷ ಜೂನ್ ಅಂತ್ಯದ ವರೆಗೆ 5,976 ಪ್ರಕರಣಗಳು ಪತ್ತೆಯಾಗಿವೆ. ಡೆಂಗಿ ನಿಯಂತ್ರಣಕ್ಕೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ’ ಎಂದು ವಿವರ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.