ADVERTISEMENT

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಮನ್ನಾ ಪ್ರಕ್ರಿಯೆ ಆರಂಭ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 11:13 IST
Last Updated 6 ಡಿಸೆಂಬರ್ 2018, 11:13 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 21 ಲಕ್ಷ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಲಾಗಿದ್ದು, ಈ ಪೈಕಿ 17 ಲಕ್ಷ ಖಾತೆದಾರರ ಸಾಲ ಮನ್ನಾ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಗುರುವಾರ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು.

‘ಮೊದಲ ಕಂತಿನಲ್ಲಿ ₹50 ಸಾವಿರ ಸಾಲ ಮನ್ನಾ ಮಾಡಲಾಗುವುದು. ಅದಕ್ಕಾಗಿ ₹ 6500 ಕೋಟಿ ಮೀಸಲು ಇಟ್ಟಿದ್ದೇನೆ. ಉಳಿದ ₹1.5 ಲಕ್ಷವನ್ನು ಮುಂದಿನ ಕಂತಿನಲ್ಲಿ ಮನ್ನಾ ಮಾಡಲಾಗುತ್ತದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.