ADVERTISEMENT

ಹೊಸದಾಗಿ 100 ಎನ್‌ಸಿಡಿ ಕ್ಲಿನಿಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 19:45 IST
Last Updated 18 ಜನವರಿ 2020, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ರಾಜ್ಯದಲ್ಲಿ ಹೊಸದಾಗಿ 100 ಎನ್‌ಸಿಡಿ ಕ್ಲಿನಿಕ್‌ಗಳನ್ನು (ಸಾಂಕ್ರಾಮಿಕವಲ್ಲದ ರೋಗಗಳಿಗೆ ಚಿಕಿತ್ಸೆ) ಪ್ರಾರಂಭಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಸದ್ಯ ರಾಜ್ಯದಲ್ಲಿ30ಜಿಲ್ಲಾ ಮಟ್ಟದ ಹಾಗೂ243ತಾಲ್ಲೂಕು ಮಟ್ಟದ ಎನ್‌ಸಿಡಿ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿವೆ. ಮಧುಮೇಹ, ರಕ್ತದೊತ್ತಡ, ಮೂತ್ರಪಿಂಡ ಸಮಸ್ಯೆ, ಕ್ಯಾನ್ಸರ್, ಹೃದಯ ಕಾಯಿಲೆಗಳಿಗೆ ಈ ಕೇಂದ್ರಗಳಲ್ಲಿ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತದೆ.

ರಾಜ್ಯದ ಎಲ್ಲ ತಾಲ್ಲೂಕುಗಳಿಗೂ ಈ ಸೇವೆಯನ್ನು ವಿಸ್ತರಿಸಿ, ಗ್ರಾಮೀಣ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಆರೋಗ್ಯ ಇಲಾಖೆಯು ಇನ್ನಷ್ಟು ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಪ್ರಸ್ತಾವನೆ ಸಲ್ಲಿಸಿತ್ತು. ಏಪ್ರಿಲ್‌ನಿಂದ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.