ADVERTISEMENT

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ₹300 ಕೋಟಿ: ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 4:57 IST
Last Updated 27 ಜನವರಿ 2020, 4:57 IST
ಸಮಾಲೋಚನಾ ಸಭೆಯನ್ನು ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದಮೂರ್ತಿ ಉದ್ಘಾಟಿಸಿದರು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಎನ್.ವೇಂಕಟನಾರಾಯಣ, ಲಲಿತಕಲಾ ಅಕಾಡೆಮಿಯ ಅಧ್ಯಕ್ಷ ಮಹೇಂದ್ರ, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್. ರಶ್ಮಿ, ಎಚ್‌ಪಿಸಿಎಲ್‌ ಅಧಿಕಾರಿ ಕೃಷ್ಣ ಇದ್ದರು

ಬೆಂಗಳೂರು: ‘ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ₹300 ಕೋಟಿ ಅನುದಾನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದಮೂರ್ತಿ ಹೇಳಿದರು.

ಬ್ರಾಹ್ಮಣ ಸಂಘ–ಸಂಸ್ಥೆಗಳ ಜನಪ್ರತಿನಿಧಿಗಳ ಜತೆ ಭಾನುವಾರ ಸಮಾಲೋಚನಾ ಸಭೆ ನಡೆಸಿದ ಅವರು, ‘ರಾಜ್ಯದಾದ್ಯಂತ ಪ್ರವಾಸ ಮಾಡಿ ಸಮಾಜದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನ ನಡೆಸಲಾಗುವುದು’ ಎಂದರು.

‘ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಕೇಂದ್ರ ಸರ್ಕಾರದ ಯೋಜನೆಯನ್ನು ರಾಜ್ಯದಲ್ಲೂ ತಕ್ಷಣ ಜಾರಿಗೆ ತರಲು ಒತ್ತಾಯಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.