ADVERTISEMENT

ನೀಟ್: ಅರ್ಜಿ ಮಾಹಿತಿ ತಿದ್ದುಪಡಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 14:41 IST
Last Updated 30 ಜುಲೈ 2023, 14:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಬೆಂಗಳೂರು: ನೀಟ್ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕೆ ನೋಂದಾಯಿಸಿ, ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಜುಲೈ 31ರ ಬೆಳಿಗ್ಗೆ 11 ಗಂಟೆಯಿಂದ ಆಗಸ್ಟ್ 1ರ ಮಧ್ಯಾಹ್ನ 11.59ರವರೆಗೆ ಅರ್ಹತೆಗೆ ಅನುಗುಣವಾಗಿ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ನೀಟ್ ಅರ್ಜಿಯಲ್ಲಿ ಘೋಷಿಸಿರುವ, ಆದರೆ ಇನ್ನೂ ಶುಲ್ಕ ಪಾವತಿ ಮಾಡದಿರುವ ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಪಾವತಿಸಿ ನಂತರ ತಿದ್ದುಪಡಿ ಮಾಡಿಕೊಳ್ಳಬಹುದು. ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ಕಳುಹಿಸಲಾಗುವುದಿಲ್ಲ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

ಆಗಸ್ಟ್‌ 1ರಂದು ಕನ್ನಡ ಭಾಷೆ ಪರೀಕ್ಷೆ: ಜುಲೈ 26 ಮತ್ತು 28ರಂದು‌ ನೀಟ್ ಅರ್ಜಿ ಸಲ್ಲಿಸಿದ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಆಗಸ್ಟ್ 1ರಂದು ಮಧ್ಯಾಹ್ನ 3ರಿಂದ ರಿಂದ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು.

ADVERTISEMENT

ಜುಲೈ 25ರಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ ಹವಾಮಾನ ವೈಪರೀತ್ಯ, ಮಳೆಯ ಕಾರಣದಿಂದ ಗೈರುಹಾಜರಾಗಿದ್ದವರೂ ಆಗಸ್ಟ್‌ 1ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬಹುದು. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈಟಿನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ಈ ಬಗ್ಗೆಯೂ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ಕಳುಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.