ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ಎಲ್ಲ ವೃತ್ತಿಪರ ಕೋರ್ಸ್‌ಗಳ ಎರಡನೇ ಸುತ್ತಿನ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆ.21ರಿಂದ 25ರವರೆಗೆ ಆಯ್ಕೆಗಳನ್ನು ಬದಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.
ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಆ.29ರಂದು ಪ್ರಕಟಿಸಲಾಗುವುದು. ಆಯುರ್ವೇದ ಕೋರ್ಸ್‌ಗಳ ಸೀಟು ಲಭ್ಯತಾ ಪಟ್ಟಿಯನ್ನು ಪ್ರಕಟಿಸಿದ್ದು, ಈ ಕೋರ್ಸ್‌ಗೆ ಮಾತ್ರ ಆಯ್ಕೆಗಳನ್ನು ದಾಖಲು ಮಾಡಲು ಅವಕಾಶ ನೀಡಲಾಗಿದೆ. ಮೊದಲ ಸುತ್ತಿನಲ್ಲಿ ಛಾಯ್ಸ್-1 ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದವರನ್ನು ಹೊರತುಪಡಿಸಿ, ಛಾಯ್ಸ್- 2 ಹಾಗೂ 3 ಆಯ್ಕೆ ಮಾಡಿಕೊಂಡವರರೂ ಆಯುರ್ವೇದ ಕೋರ್ಸ್‌ಗಳ ಪ್ರವೇಶಕ್ಕೆ ಆಯ್ಕೆಗಳನ್ನು ದಾಖಲಿಸಬಹುದು.
ಎರಡನೇ ಸುತ್ತಿನಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್‌ಗಳಿಗೆ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಕಾಲೇಜಿಗೆ ಹೋಗಿ ಪ್ರವೇಶ ಪಡೆಯಬೇಕು. ಅಂಥವರಿಗೆ ಛಾಯ್ಸ್- 2 ಮತ್ತು ಛಾಯ್ಸ್-3ಗೆ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.